ಮೆಟ್ರೋ ಪ್ರಯಾಣಿಕರೇ ಗಮನಿಸಿ: ನಾಳೆ ನೇರಳೆ ಮಾರ್ಗದಲ್ಲಿ ಸಂಚಾರ ಬಂದ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರಿನ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಕಾಮಗಾರಿ ಹಿನ್ನಲೆ ನಾಳೆ ಬೆಳಿಗ್ಗೆ 9.30ರಿಂದ ನಮ್ಮ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ಮಾಹಿತಿ ಬಿಡುಗಡೆ ಮಾಡಿದ್ದು, ಶನಿವಾರ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.
ಈ ಹಿನ್ನಲೆಯಲ್ಲಿ ನೇರಳೆ ಮಾರ್ಗದ ಎಂಜಿ ರಸ್ತೆ, ಮೆಟ್ರೋ ನಿಲ್ದಾಣದಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ.
ಭಾನುವರ ಬೆಳಿಗ್ಗೆ 7 ಗಂಟೆಯ ಬಳಿಕ ಎಂದಿನಂತೆ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸೇವೆ ಎಂದಿನಂತೆ ಪುನಾರಂರಭಿಸಲಾಗುತ್ತಿದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!