ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೆಟ್ರೋ ದರ ಏರಿಕೆ ಸಂಬಂಧ ಇಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (BMRCL) ಕರೆದಿದ್ದ ಸುದ್ದಿಗೋಷ್ಠಿಯನ್ನು ರದ್ದು ಮಾಡಲಾಗಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಬಿಎಂಆರ್‌ಸಿಎಲ್ ಸುದ್ದಿಗೋಷ್ಠಿ (Press Meet) ನಡೆಸಿ ದರ ಏರಿಕೆಯ ಬಗ್ಗೆ ವಿವರಣೆ ನೀಡಬೇಕಿತ್ತು. ಆದರೆ ಬಿಎಂಆರ್‌ಸಿಎಲ್ ಕರೆದಿದ್ದ ಸುದ್ದಿಗೋಷ್ಠಿಯನ್ನು ದಿಢೀರ್ ರದ್ದು ಮಾಡಿದೆ.
ಸುದ್ದಿಗೋಷ್ಠಿ ರದ್ದಿಗೆ ಕಾರಣ ನೀಡಿಲ್ಲ. ದರ ಏರಿಕೆ ಖಚಿತವಾಗಿದ್ದರೂ ಕನಿಷ್ಠ, ಗರಿಷ್ಠದ ಜೊತೆ ಮಧ್ಯದಲ್ಲಿ ಬರುವ ನಿಲ್ದಾಣಗಳಿಗೆ ಎಷ್ಟು ದರ ನಿಗದಿ ಮಾಡಬೇಕು ಎನ್ನುವುದರ ಬಗ್ಗೆ ಗೊಂದಲ ಇರುವ ಕಾರಣ ಸುದ್ದಿಗೋಷ್ಠಿಯನ್ನು ರದ್ದು ಮಾಡಲಾಗಿದೆ ಎನ್ನಲಾಗುತ್ತಿದೆ.
ಗೊಂದಲಗಳನ್ನು ಇತ್ಯರ್ಥ ಮಾಡಿ ಮುಂದಿನ ವಾರ ಮೆಟ್ರೋ ದರ ಏರಿಕೆ ಸಂಬಂಧ ಸುದ್ದಿಗೋಷ್ಠಿ ನಡೆಸಲು ಬಿಎಂಆರ್‌ಸಿಎಲ್ ಮುಂದಾಗಿದೆ.