ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಮೆಕ್ಸಿಕೋದಲ್ಲಿ ಮೆಟ್ರೋ ಮೇಲ್ಸೇತುವೆ ಕುಸಿದಿದ್ದು, ರೈಲು ಅಪಘಾತವಾಗಿ 13 ಮಂದಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೆಕ್ಸಿಕೋದ ರಾಜಧಾನಿಯ ದಕ್ಷಿಣದಲ್ಲಿ ಸ್ಥಳೀಯ ಕಾಲಮಾನ 10:30 ಕ್ಕೆ ಅಪಘಾತ ಸಂಭವಿಸಿದೆ. ಮೆಟ್ರೋದ ಲೈನ್ 12 ರಲ್ಲಿ ಅಪಘಾತ ಸಂಭವಿಸಿದ್ದು, ಅವಶೇಷಗಳಡಿ ಕಾರುಗಳು ಸಿಕ್ಕಿಹಾಕಿಕೊಂಡಿವೆ, ಇನ್ನು ಹಲವರ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.