ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಕರಿಗೆ ಮೆಟ್ರೋ ನಿಲ್ದಾಣಗಳಿಂದ ಸುಲಭ ಆಟೋರಿಕ್ಷಾ ಸೌಲಭ್ಯ ಒದಗಿಸುವ ಹಿನ್ನೆಲೆಯಲ್ಲಿ ʼಮೆಟ್ರೋ ಮಿತ್ರʼ ಆಪ್ ಸೇವೆಯು ನಾಳೆಯಿಂದ ಪ್ರಾರಂಭವಾಗಲಿದೆ.
ಆಟೊ ರಿಕ್ಷಾ ಚಾಲಕರ ಒಕ್ಕೂಟವು (ಎಆರ್‌ಡಿಯು) ನಾಳೆ ಮಧ್ಯಾಹ್ನ 3ಗಂಟೆಗೆ ಈ ಆಪ್‌ಗೆ ಚಾಲನೆ ನೀಡಲಿದೆ.
ಜಯನಗರ ಮೆಟ್ರೊ ನಿಲ್ದಾಣದಿಂದ ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕವಾಗಿ ‘ಮೆಟ್ರೊ ಮಿತ್ರ’ ಇರಲಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ವಿಸ್ತರಿಸುವ ಗುರಿಯನ್ನು ಎಆರ್‌ಡಿಯು ಹೊಂದಿದೆ.
ಆಟೊಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲು ಈ ಆಪ್ ಅಭಿವೃದ್ಧಿಪಡಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರು ನಿಲ್ದಾಣಗಳಲ್ಲಿ ಲಭ್ಯವಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಸಮೀಪದ ಸ್ಥಳಗಳಿಗೆ ಆಟೋರಿಕ್ಷಾ ಸೌಲಭ್ಯವನ್ನು ನಿಗದಿತ ದರಲ್ಲಿ ಪಡೆಯಬಹುದು. ಇದಕ್ಕೆ ಯಾವುದೇ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಅಗತ್ಯವಿಲ್ಲ.