ಮೆಟ್ರೋ ಪಿಲ್ಲರ್‌ ಕುಸಿದ ಪ್ರಕರಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಟ್ರೋ ಪಿಲ್ಲರ್‌ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಮಾಧ್ಯಮಗಳ ಸುದ್ದಿ ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಿತ ಕೇಸ್‌ ದಾಖಲಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಯಾವೆಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ? ಮುಂಜಾಗ್ರತಾ ಕ್ರಮದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ ಎಂಬ ಬಗ್ಗೆ ರಿಟ್‌ ಅರ್ಜಿ ಸಲ್ಲಿಸಲು ರಿಜಿಸ್ಟರ್‌ ಜನರಲ್‌ಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನ (Bengaluru) ನಾಗವಾರ ರಿಂಗ್ ರಸ್ತೆಯ ಹೆಚ್‍ಬಿಆರ್ ಲೇಔಟ್‍ನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿತ್ತು.

ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಎಂಆರ್‌ಸಿಎಲ್‌ನಿಂದ 20 ಲಕ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ರೂ. ಪರಿಹಾರ ಘೋಷಿಸಿದರು. ಅಲ್ಲದೇ ಮೆಟ್ರೋ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿದಿದೆ ಎಂಬ ಆರೋಪ ಕೇಳಿಬಂದಿದ್ದರಿಂದ ಮೂವರು ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!