ಮೆಟ್ರೋ ಪಿಲ್ಲರ್ ಕುಸಿತ : ಇದು 40% ಸರ್ಕಾರದ ಫಲಿತಾಂಶ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕುಸಿದು ತಾಯಿ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆ ಮಗಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ವಿರೋಧ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಇದು 40% ಸರ್ಕಾರದ ಫಲಿತಾಂಶವಾಗಿದೆ. ಗುಣಮಟ್ಟದ ಕೆಲಸ ಮಾಡೋದಿಲ್ಲ. ತಮ್ಮ ಜೇಬು ತುಂಬಿಸಿಕೊಂಡು ಕಳಪೆ ಕೆಲಸ ಮಾಡುವಂತೆ ಮಾಡಿದ್ದಾರೆ. ಸರ್ಕಾರದ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಜನರ ಬದುಕಿನ ಜತೆ ಸರ್ಕಾರ ಚೆಲ್ಲಾಟ ಆಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!