ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದಲ್ಲಿ ಭಾನುವಾರ ನೂತನ ವಿದ್ಯುತ್ ದೀಪಾಲಂಕಾರ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ , ಮೆಟ್ರೋ ಪಿಲ್ಲರ್ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರ್ಯಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.
ಸರ್ಕಾರದ ಆಸ್ತಿಗಳಲ್ಲಿ ದೀಪಾಲಂಕಾರ ಮಾಡುತ್ತೇವೆ, ಖಾಸಗಿ ಸ್ಥಳ, ಕಟ್ಟಡಗಳಲ್ಲಿ ದೀಪಾಲಂಕಾರ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ ಸುಮಾರು 40 ಕಡೆ ದೀಪಾಲಂಕಾರಕ್ಕೆ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಯಾವ, ಯಾವ ಸ್ಥಳಗಳಲ್ಲಿ ದೀಪಾಲಂಕಾರ ಮಾಡುತ್ತೇವೆ ಎಂಬುವುದನ್ನು ಅಧಿಕಾರಿಗಳು ತಿಳಿಸಲಿದ್ದಾರೆ. ಇನ್ನು ಬೆಂಗಳೂರು ನಗರದಲ್ಲಿ ಎಲ್‌ಇಡಿ ದೀಪ ಬಳಸಲಾಗುವುದು. ಈ ಹಿಂದೆ ಕರೆಯಲಾಗಿದ್ದ ಟೆಂಡರ್ ವಿಫಲವಾಗಿದ್ದು, ಮರು ಟೆಂಡರ್ ಕರೆಯಲಾಗುವುದು. ಡಿಪಿಆರ್ ಕೂಡ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.