ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇರಳೆ ಮಾರ್ಗ ಮೆಟ್ರೋ ರೈಲು ಬಿಡದಿವರೆಗೆ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸಲು ಸೂಚಿಸಿದ್ದೇನೆ. ಜೊತೆಗೆ ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತಿಸಲು ಆದೇಶ ಮಾಡಲಾಗಿದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿ, ಬಿಡದಿ ಭಾಗದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಬಿಡದಿಗೆ ಮೆಟ್ರೋ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಂಬಂಧಿಸಿದ ಎಂಎಲ್ಎ, ಎಂಪಿ ಮನವಿ ಮಾಡಿದ್ರು. ಹೀಗಾಗಿ ಡಿಪಿಆರ್ ಮಾಡೋದಕ್ಕೆ ಸೂಚಿಸಿದ್ದೇನೆ. ಹಿಂದೆ ಬಿಡದಿ ಸ್ಮಾರ್ಟ್ ಸಿಟಿಗಾಗಿ ಹತ್ತು ಸಾವಿರ ಎಕರೆ ಜಾಗ ವಶ ಪಡಿಸಿಕೊಳ್ಳಲಾಗಿತ್ತು. ಅದು ಹಾಗೇಯೆ ಉಳಿದುಕೊಂಡಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಡೆವಲಪ್ಮೆಂಟ್ ಪ್ಲ್ಯಾನಿಂಗ್ ಗೆ ಬಿಡದಿಯನ್ನು ಘೋಷಿಸಲಾಗಿದೆ. ಮುಂದೆ ಲೀಗಲ್ ಪ್ರೊಸಿಜರ್ ಆಗಲಿದೆ. ಎಲ್ಲರಿಗೂ ಶಕ್ತಿ ತುಂಬುವ ದೃಷ್ಟಿಯಿಂದ ಈ ಘೋಷಣೆಗಳನ್ನು ಮಾಡಲಾಗುತ್ತಿದೆ. ಸ್ಥಳೀಯರಿಗೆ ಉದ್ಯೋಗಕ್ಕಾಗಿ ಪ್ರತ್ಯೇಕ ಸಭೆ ನಡೆಸಿ, ಎಲ್ಲ ಕಾರ್ಖಾನೆಗಳ ಬಳಿ ಮನವಿ ಮಾಡಲಾಗುವುದು ಎಂದು ಬಿಡದಿಯಲ್ಲಿ ಡಿಸಿಎಂ ಡಿಕೆಶಿ ಹೇಳಿದ್ದಾರೆ.