Wednesday, November 5, 2025

GOOD NEWS | 2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮ್ಮ ಮೆಟ್ರೋದ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಘೋಷಿಸಿದ್ದಾರೆ.

‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ ಮುಂದಿನ ವರ್ಷ ಮೇ ತಿಂಗಳಲ್ಲಿ ಆರಂಭವಾಗಲಿದೆ. ಈ ಮಾರ್ಗವು 13.76 ಕಿ.ಮೀ. ಭೂಗತ ಮಾರ್ಗವನ್ನು ಹೊಂದಿದ್ದು, ಸಂಚಾರ ಸುಗಮವಾಗಲಿದೆ’ ಎಂದಿದ್ದಾರೆ.

‘ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ ಮುಂದುವರಿಯುತ್ತದೆ! ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ 13.76 ಕಿಮೀ ಉದ್ದದ ಮಾರ್ಗವು ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುತ್ತದೆ’ ಎಂದು ಅವರು ಹೇಳಿದರು.

error: Content is protected !!