ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋದ ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆ ನಾಳೆ ಕೆ.ಆರ್ ಪುರದಿಂದ ಗರುಡಾಚಾರ್ ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಬೈಯಪ್ಪನಹಳ್ಳಿಯಿಂದ ಕೆ.ಆರ್ ಪುರ ಮೆಟ್ರೊ ನಿಲ್ದಾಣದ ನಡುವಿನ ಮಾರ್ಗದ ಸುರಕ್ಷತಾ ಪರಿಶೀಲನೆ ಹಿನ್ನೆಲೆಯಲ್ಲಿ ಮೆಟ್ರೊ ರೈಲು ಕಾರ್ಯಾಚರಣೆಯಲ್ಲಿ ಬದಲಾವಣೆ ಮಾಡಲಾಗಿದೆ.
ನಾಳೆ ಇಡೀ ದಿನ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ರದ್ದುಪಡಿಸಲಾಗಿದೆ.
ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30ರ ವರೆಗೆ ಮೆಟ್ರೊ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ ಎಂದಿನಂತೆ ಮೆಟ್ರೊ ರೈಲುಗಳು ಸಂಚರಿಸಲಿವೆ. ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ರೈಲು ಸೇವೆ ಲಭ್ಯವಿರುತ್ತದೆ.