ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿಹಿ ಸುದ್ದಿ ನೀಡಿದೆ.
ಭಾನುವಾರದಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ವೈಟ್ಫೀಲ್ಡ್ , ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್ಸಿಎಲ್ ಕೋರಿದೆ.