GOOD NEWS | ಭಾನುವಾರದಂದು ಬೇಗನೇ ಆರಂಭವಾಗಲಿದೆ ಮೆಟ್ರೋ ಸೇವೆ, ಎಷ್ಟೊತ್ತಿಗೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿಹಿ ಸುದ್ದಿ ನೀಡಿದೆ.

ಭಾನುವಾರದಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ವೈಟ್​​ಫೀಲ್ಡ್​ , ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!