Tuesday, August 9, 2022

Latest Posts

ಬೆಂಗಳೂರಿಗರೇ ಗಮನಿಸಿ… ನಾಳೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಫೆ.28ರಂದು ಬೆಂಗಳೂರಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ನೇರಳೆ ಮಾರ್ಗದ ಸಂಚಾರವನ್ನು 2 ತಾಸುಗಳ ಕಾಲ ಸ್ಥಗಿತಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ಹೇಳಿದೆ.

ನೇರಳೆ ಬಣ್ಣದ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ಮಾರ್ಗಗಳ ನಡುವಿನ ದುರಸ್ತಿ ಕಾರ್ಯ ನಡೆಯಲಿದ್ದು, ನಾಳೆ ಬೆಳಗ್ಗೆ 7 ರಿಂದ 9ರವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.

ಹಸಿರು ಮಾರ್ಗದಲ್ಲಿ ರೈಲು ಸೇವೆ ಎಂದಿನಂತೆ ಮುಂದುವರೆಯಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ. ಕೊರೋನಾ ನಂತರ ಸೆಪ್ಟೆಂಬರ್ 7ರಿಂದ ನೇರಳೆ ಮಾರ್ಗ ಹಾಗೂ ಸೆಪ್ಟೆಂಬರ್ 9ರಿಂದ ಹಸಿರು ಮಾರ್ಗ ಪುನರಾರಂಭಗೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss