ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಮಂಗಳವಾರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ರೈಲಿನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಸೇವೆಯಲ್ಲಿ ವಿಳಂಬ ಉಂಟಾಯಿತು.
ತಕ್ಷಣ ಕಾರ್ಯಾಚರಣೆಗೆ ಇಳಿದ ಸಿಬ್ಬಂದಿ
ಬಿಎಂಆರ್‌ಸಿಎಲ್ ಮಾಹಿತಿ ಪ್ರಕಾರ, ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲು ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯ ಆರಂಭಿಸಿವೆ. ಕೆಲ ರೈಲುಗಳ ವೇಳಾಪಟ್ಟಿಯಲ್ಲಿ ಮಾತ್ರ ವಿಳಂಬವಾಗಿದ್ದು, ಪರಿಸ್ಥಿತಿ ಸಹಜಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ:
ನಿಲ್ದಾಣಗಳಲ್ಲಿ ಹೆಚ್ಚಿದ ಜನಸಂದಣಿ
ಸಂಚಾರ ಸ್ಥಗಿತಗೊಂಡ ಕಾರಣ ಕಬ್ಬನ್ ಪಾರ್ಕ್ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲುಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. ನೂರಾರು ಮಂದಿ ಪ್ಲಾಟ್‌ಫಾರ್ಮ್‌ಗಳಲ್ಲಿ ಸೇರಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು.
ಪ್ರಯಾಣಿಕರ ಅಸಮಾಧಾನ
ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸೇವೆ ವಿಳಂಬವಾಗಿದ್ದರಿಂದ ಹಲವರು ಪರ್ಯಾಯ ವ್ಯವಸ್ಥೆ ಹುಡುಕಬೇಕಾಯಿತು. ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.



