ಆಗಸ್ಟ್ 27 ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೆ.ಆರ್.ಪುರಂನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದ ಸೇಫ್ಟಿ ಟೆಸ್ಟ್ ಮಾಡಲಾಗುತ್ತಿದ್ದು , ಈ ಹಿನ್ನಲೆ ನೇರಳೆ ಮಾರ್ಗದಲ್ಲಿ ಆ.27ರಂದು ಬೆಳಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ನಮ್ಮ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಆಗಲಿದೆ.

ಕೆ.ಆರ್.ಪುರಂನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ಮಾರ್ಗದಲ್ಲಿ ಸೇಫ್ಟಿ ಟೆಸ್ಟ್ ಮಾಡಲಾಗುತ್ತಿದ್ದು, ಈ ಹಿನ್ನಲೆ ಈ ಕೆಳಕಂಡ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿ ನಿಲ್ದಾಣಗಳ ನಡುವೆ, ಬೈಯ್ಯಪ್ಪನಹಳ್ಳಿ-ಸ್ವಾಮಿ ವಿವೇಕಾನಂದ ನಿಲ್ದಾಣಗಳ ನಡುವೆ , ವೈಟ್​ಫೀಲ್ಡ್-ಕೆ.ಆರ್.ಪುರಂ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!