ಮಂಗಳೂರು–ಉಡುಪಿ ನಡುವೆ ಮೆಟ್ರೊ ರೈಲು? ವರದಿ ಕೇಳಿದ ರಾಜ್ಯ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು–ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಆರಂಭಿಸುವ ಕುರಿತು ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಈ ಕುರಿತು ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ.

ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಅಲ್ಲದೆ ವಾಣಿಜ್ಯ ನಗರವಾಗಿರುವ ಮಂಗಳೂರಿನಲ್ಲಿ ಇರುವ ಸೌಲಭ್ಯ, ವೈದ್ಯಕೀಯ ಸೌಲಭ್ಯ, ಶಿಕ್ಷಣ ಸಂಸ್ಥೆಗಳು, ಕಡಲ ಕಿನಾರೆ ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಮೆಟ್ರೊ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸಚಿವರು ತಿಳಿಸಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಈ ಪತ್ರವನ್ನು ಜಿಲ್ಲಾಧಿಕಾರಿ ಪರವಾಗಿ ನಗರಾಭಿವೃದ್ಧಿ ಕೋಶವು, ಎನ್‌ಎಂಪಿಎ, ಎಂಆರ್‌ಪಿಎಲ್, ನಗರ ಪೊಲೀಸ್ ಕಮಿಷನರ್, ಎನ್‌ಐಟಿಕೆ, ಡಿಎಫ್‌ಒ, ಸಾರಿಗೆ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ರವಾಸೋದ್ಯಮ ಇಲಾಖೆ, ಆರೋಗ್ಯ ಇಲಾಖೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯನಿರ್ವಹಣಾಧಿಕಾರಿ, ಕೆನರಾ ವಾಣಿಜ್ಯೋದ್ಯಮ ಕೈಗಾರಿಕಾ ಸಂಘಕ್ಕೆ ಕಳುಹಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!