ದಿಢೀರ್ ನಿಂತಲ್ಲೇ ನಿಂತ ಮೆಟ್ರೋ ರೈಲು: ಪ್ರಯಾಣಿಕರು ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವುಂಟಾಗಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೈಲು ನಿಂತಲ್ಲೇ ನಿಂತಿದೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುವೆಂಪು ಮೆಟ್ರೋ ನಿಲ್ದಾಣದವರೆಗೆ ವಿದ್ಯುತ್ ಸಂಪರ್ಕದಲ್ಲಿ ತಾಂತ್ರಿಕ ಸಮಸ್ಯೆಯುಂಟಾಗಿದ್ದು, ಇದರಿಂದಾಗಿ ಹಸಿರು ಮಾರ್ಗದ ಮೆಟ್ರೋ ನಿಂತಲ್ಲೇ ನಿಲ್ಲುವಂತಾಗಿದೆ.

ಇತರೆ ನಿಲ್ದಾಣಗಳಲ್ಲಿಯೂ ಮೆಟ್ರೋ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

ಇದರಿಂದಾಗಿ ಸಾಯಂಕಾಲ 4:11ರಿಂದ ಹಸಿರು ಮಾರ್ಗದ ಮೆಟ್ರೋದಲ್ಲಿ ವ್ಯತ್ಯಯವಾಗಿದ್ದು, ತಾಂತ್ರಿಕ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಮೆಟ್ರೋ ಸಿಬ್ಬಂದಿಗಳು ಮುಂದಾಗಿದ್ದಾರೆ. ಏಕಾಏಕಿ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾದ್ದರಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. On 6th August 24 also train between RV ROAD and SILK INSTITUTE on GREEN LINE stopped from 5.45pm to 7.10pm for same reason. This shows carelessness of maintenance activities by mm metro management/administration.

LEAVE A REPLY

Please enter your comment!
Please enter your name here

error: Content is protected !!