Thursday, August 11, 2022

Latest Posts

ನಾಳೆಯಿಂದ ರಾತ್ರಿ 10 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿಗಳಿಗೆ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದು ನಮ್ಮ ಮೆಟ್ರೋ ಸಂಚಾರವನ್ನು ರಾತ್ರಿ 10 ಗಂಟೆಯವರೆಗೆ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದು, ಈ ಬಳಿಕ, ನಾಳೆಯಿಂದ ಮೆಟ್ರೋ ಸಂಚಾರ ರಾತ್ರಿ 10 ಗಂಟೆಯವರೆಗೆ ವಿಸ್ತರಣೆ ಮಾಡಿ ಬಿಎಂ ಆರ್ ಸಿ ಆದೇಶಿಸಿದೆ.
ಈ ಕುರಿತಂತೆ ಬಿಎಂಆರ್ ಸಿ ಎಲ್ ( BMRCL ) ಆದೇಶ ಹೊರಡಿಸಿದ್ದು, ನಗರದಲ್ಲಿ ಮೆಟ್ರೋ ರೈಲು ಸಂಚಾರ ಸೇವೆಯು ಸೆಪ್ಟೆಂಬರ್ 18ರ ಶನಿವಾರದಿಂದ ರಾತ್ರಿ 10ರವರೆಗೆ ಇರಲಿದೆ ಎಂಬುದಾಗಿ ತಿಳಿಸಿದೆ.
ಅಂದಹಾಗೇ ಮೆಜೆಸ್ಟಿಕ್ ನ ಕೆಂಪೇಗೌಡ ಮೆಟ್ರೋ ನಿಲ್ದಾಣ, ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳಿಂದ ರಾತ್ರಿ 9.30ಕ್ಕೆ ಕೊನೆಯ ಮೆಟ್ರೋ ರೈಲು ಹೊರಡಲಿದೆ.
ಇದಷ್ಟೇ ಅಲ್ಲದೇ ಬೆಳಿಗ್ಗೆ 7ರ ಬದಲಾಗಿ 6 ಗಂಟೆಯಿಂದಲೇ ಮೆಟ್ರೋ ರೈಲು ಸೇವೆ ಆರಂಭಗೊಳ್ಳಲಿದೆ. ರಾತ್ರಿ 9 ಗಂಟೆಗೆ ಕೊನೆಗೊಳ್ಳುತ್ತಿದ್ದಂತ ಮೆಟ್ರೋ ರೈಲು ಸಂಚಾರ ರಾತ್ರಿ 10ರವರೆಗೆ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss