ಹೊಸ ದಿಗಂತ ವರದಿ, ಧಾರವಾಡ:
ಮಾಸ್ಕ್ ಧರಿಸದವರಿಗೆ ದಂಡ ಹಾಗೂ ಕೋವಿಡ್ ಪರೀಕ್ಷೆ ನಡೆಸಲು ಮಹಾನಗರ ಪಾಲಿಕೆ ಹಾಗೂ ಗ್ರಾಮ ಪಂಚಾಯತಿಗಳಿಗೆ
ಜಿಲ್ಲಾಡಳಿತ ಸೂಚಿಸಿತ್ತು. ಆದರೆ, ಮಹಾನಗರ ಪಾಲಿಕೆ ನಿಯಮ ಅನುಷ್ಠಾನಿಸುವಲ್ಲಿ ನಿರ್ಲಕ್ಷ ತೋರಿದಕ್ಕೆ ಜಿಲ್ಲಾಡಳಿತ ಕಾರಣ ಕೇಳಿ ನೋಟಿಸ್ ನೀಡಿದೆ.
ಈ ಕುರಿತು ಪ್ರಕಟಣೆ ನೀಡಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಕೋವಿಡ್ ನಿಮಯ ಕಟ್ಟನಿಟ್ಟಾಗಿ ಅನುಷ್ಠಾನಿಸುವಂತೆ ಪಾಲಿಕೆ, ಜಿಲ್ಲಾ ಪಂಚಾಯತಿ ಮೂಲಕ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಆದೇಶ ಪಾಲಿಸಲು ಸೂಕ್ತ ನಿರ್ದೇಶನ ನೀಡುವಂತೆ ಜಿಪಂ ಸಿಇಓ ಅವರಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ದಂಡ ವಿಧಿಸಲು ಮತ್ತು ಅವರಿಗೆ ಕೋವಿಡ್ ಟೆಸ್ಟ್ ಮಾಡಿಸಲು ಮಹಾನಗರ ಪಾಲಿಕೆ, ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಿತ್ತು. ಆದೇಶ ಪಾಲಿಸದ ಹಿನ್ನಲೆ ಮಹಾನಗರ ಪಾಲಿಕೆಗೆ ಕಾರಣ ಕೇಳಿ ನೋಟಿಸ್ ಜಾರಿಗೆ ಮಾಡಿದೆ ಎಂದಿದ್ದಾರೆ.
ರಾಷ್ಟçದಲ್ಲಿ ಕೋವಿಡ್ 2ನೇ ಅಲೆ ಹರಡುತ್ತಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾರ್ಗಸೂಚಿ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ಆದೇಶಿಸಿದೆ. ಸಾರ್ವಜನಿಕರು ಮಾಸ್ಕ್ ಧಾರಣೆ ಮತ್ತು ಅಂತರ ಕಾಪಾಡುವ ಮೂಲಕ ಸಹಕಾರ ನೀಡುವಂತೆ ಹೇಳಿದ್ದಾರೆ.