Tuesday, June 28, 2022

Latest Posts

ಸೆಪ್ಟೆಂಬರ್ 30ರವರೆಗೆ ಕೊರೋನಾ ರೂಲ್ಸ್ ಮುಂದುವರೆಸಿದ ಗೃಹ ಸಚಿವಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಮೂರನೇ ಅಲೆಯ ಭೀತಿ ಹಿನ್ನೆಲೆ ಕೇಂದ್ರ ಗೃಹ ಸಚಿವಾಲಯ ಕೊರೋನಾ ನಿಯಮಗಳನ್ನು ಸೆಪ್ಟೆಂಬರ್ 30ರವರೆಗೂ ಮುಂದುವರೆಸಿದೆ.
ಈ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲ, ಕೊರೋನಾ ಪ್ರಕರಣಗಳು, ಸಕ್ರಿಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಹಬ್ಬಗಳಲ್ಲಿ ಹೆಚ್ಚು ಜನರು ಸೇರಲು ನಿರ್ಬಂಧ ಹೇರಲಾಗಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಳೀಯ ಕೊರೋನಾ ನಿಯಮಾವಳಿಗಳನ್ನು ಮುಂದುವರೆಸಿಕೊಂಡು ಹೋಗುವಂತೆ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಜನದಟ್ಟನೆ ತಪ್ಪಿಸಲು ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಕೊರೋನಾ ಸೋಂಕು ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ಟ್ರಿಕ್, ಟೆಸ್ಟ್, ಟ್ರ್ಯಾಕ್, ಟ್ರೀಟ್ ಹಾಗೂ ವ್ಯಾಕ್ಸಿನೇಷನ್ ಗಳನ್ನು ಅನುಸರಿಸಬೇಕು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss