ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2024 ರ 25 ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಿಗ್ ಫೈಟ್ ಎದುರಿಸಲಿದೆ.
ಈ ಪಂದ್ಯವು ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ನಡುವಿನ ಆಕರ್ಷಕ ಹೋರಾಟಕ್ಕೆ ಸಾಕ್ಷಿಯಾಗಲಿದೆ. ನಾಯಕತ್ವದ ವಿಚಾರದಲ್ಲಿ ನಿರಂತರವಾಗಿ ಟೀಕೆ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯ ಹಾಗೂ ಫಾಫ್ ಡುಪ್ಲೆಸಿಸ್ ಕೂಡ ಪ್ರಮುಖ ಸವಾಲುಗಳನ್ನು ಎದುರಿಸಲಿದ್ದಾರೆ.
ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.