May 20, 2026
Wednesday, May 20, 2026
spot_img

MI vs RCB | ಜಾಗ ಯಾವುದೇ ಇರ್ಲಿ, ಎದುರಾಳಿ ಯಾರೇ ಇರ್ಲಿ ಗೆಲ್ಲೋದು ಮಾತ್ರ ನಾವೇ! ತವರಿನಲ್ಲಿ ನೆಲಕಚ್ಚಿದ ಮುಂಬೈ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ರೋಚಕ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪ್ರದರ್ಶನ ನೀಡಿ ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ಅಮೋಘ ಗೆಲುವು ದಾಖಲಿಸಿದೆ.

ಐದು ಬಾರಿಯ ಚಾಂಪಿಯನ್ ಮುಂಬೈಗೆ ತವರಿನಲ್ಲಿ ಮತ್ತೊಮ್ಮೆ ನಿರಾಸೆ ಎದುರಾಗಿದ್ದು, ಇದು ತಂಡದ ಸತತ ಎರಡನೇ ಸೋಲಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭದಿಂದಲೇ ಆಕ್ರಮಣಕಾರಿ ಆಟ ತೋರಿತು. ತಂಡದ ಮೂವರು ಬ್ಯಾಟರ್‌ಗಳು ಅರ್ಧಶತಕ ಸಿಡಿಸಿ 240 ರನ್‌ ಪೇರಿಸಿ, ಗೆಲುವಿಗೆ 241 ರನ್‌ಗಳ ಬೃಹತ್ ಗುರಿ ನೀಡಿತು. ವಾಂಖೆಡೆಯ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿದ ಆರ್‌ಸಿಬಿ, ಮುಂಬೈ ಬೌಲರ್‌ಗಳಿಗೆ ತಲೆನೋವಾಗಿ ಪರಿಣಮಿಸಿತು.

ಇದನ್ನೂ ಓದಿ:

ಬೃಹತ್ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಕೂಡ ಶಕ್ತಿಮೀರಿದ ಹೋರಾಟ ನೀಡಿತು. ಮಧ್ಯಕ್ರಮದಲ್ಲಿ ವೇಗವಾಗಿ ರನ್‌ಗಳು ಹರಿದು ಬಂದರೂ, ನಿರ್ಣಾಯಕ ಕ್ಷಣಗಳಲ್ಲಿ ವಿಕೆಟ್ ಕಳೆದುಕೊಂಡದ್ದು ಸೋಲಿಗೆ ಕಾರಣವಾಯಿತು. ಅಂತಿಮವಾಗಿ ಮುಂಬೈ 222 ರನ್‌ಗಳಿಗೆ ಸೀಮಿತವಾಗಿ 18 ರನ್ ಅಂತರದಲ್ಲಿ ಪಂದ್ಯ ಕೈಚೆಲ್ಲಿತು.

ಕಳೆದ ಪಂದ್ಯದಲ್ಲಿ ಸೋಲು ಕಂಡಿದ್ದ ಆರ್‌ಸಿಬಿ ಈ ಗೆಲುವಿನೊಂದಿಗೆ ಮತ್ತೆ ವಿಜಯದ ಲಯಕ್ಕೆ ಮರಳಿದ್ದು, ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಇನ್ನೊಂದೆಡೆ ಮುಂಬೈ ತಂಡದ ಮೇಲೆ ಒತ್ತಡ ಹೆಚ್ಚಾಗಿದೆ. ಅಭಿಮಾನಿಗಳು ಈ ಹೈ-ವೋಲ್ಟೇಜ್ ಪಂದ್ಯವನ್ನು ಕೊನೆಯ ಓವರ್‌ವರೆಗೂ ಕಣ್ತುಂಬಿಕೊಂಡರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !