ಹೊಸದಿಗಂತ ವರದಿ, ಮಂಡ್ಯ :
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ಮಾಂತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರೇಮಾ (59) ಎಂಬಾಕೆಯೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಚನ್ನಪಟ್ಟಣದ ಖಾಸಗಿ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದಿದ್ದರು. ಈಗಾಗಲೇ ಆರು ಲಕ್ಷ ಸಾಲ ತೀರಿಸಿದ್ದರೆನ್ನಲಾಗಿದೆ. ಕೆಲವು ಕಂತು ಕಟ್ಟದ ಹಿನ್ನೆಲೆಯಲ್ಲಿ ವಾರದ ಹಿಂದೆ ಬ್ಯಾಂಕ್ ಸಿಬ್ಬಂದಿ ಮನೆಯನ್ನೇ ಜಪ್ತಿ ಮಾಡಿದ್ದರು.
ವಾರದಿಂದಲೂ ಪ್ರೇಮಾ ಅವರ ಕುಟುಂಬ ಸಂಬಂಧಿಕರ ಮನೆಯಲ್ಲಿ ವಾಸ ಮಾಡುತ್ತಿದ್ದರು. ಇದರಿಂದ ಬೇಸತ್ತು ಇಂದು ಮನೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಮ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಸಂಬಂಧ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.