ಮುಂದುವರಿದ ಮೈಕ್ರೋಫೈನಾನ್ಸ್‌ ಕಿರುಕುಳ, ಮನೆಗೆ ನುಗ್ಗಿ ಬಂಗಾರ, ಹಣ ಎತ್ತೊಯ್ದ ಸಿಬ್ಬಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.

ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್​​ ದಾಖಲಾಗಿದೆ.

ಸಂಪವ್ವ ಕುಟುಂಬ ಫೈನಾನ್ಸ್ ಕಂಪನಿ ಬಳಿ 50 ಸಾವಿರ ರೂ. ಹಣ ಸಾಲ ಪಡೆದುಕೊಂಡಿದ್ದರು. ತಿಂಗಳಿಗೆ ಎರಡು ಕಂತುಗಳಂತೆ 1250 ರೂ ಕಟ್ಟುತ್ತಿದ್ದರು. ಸಂಪವ್ವ ಮತ್ತು ಆಕೆಯ ಮಗಳು ಗದ್ದೆ ಕೆಲಸಕ್ಕೆ ಹೋಗಿದ್ದಾಗ ಕಂತು ವಸೂಲಿಗೆ ಫೈನಾನ್ಸ್ ಸಿಬ್ಬಂದಿ ಬಂದಿದ್ದಾರೆ. ಈ ವೇಳೆ ಮನೆಯಲ್ಲಿ ಇಟ್ಟಿದ್ದ 25 ಸಾವಿರ ರೂ ಹಣ, ಕಿವಿ ಓಲೈ ಕೊಂಡೊಯ್ದಿರುವುದಾಗಿ ಆರೋಪ ಮಾಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!