ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಕ್ರೋಸಾಫ್ಟ್ ಸಾಫ್ಟ್‌ವೇರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ, ಸೂಪರ್‌ಮಾರ್ಕೆಟ್, ಬ್ಯಾಂಕಿಂಗ್ ಸೇರಿದಂತೆ ಅನೇಕ ವಲಯಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ತಾಂತ್ರಿಕ ಸಮಸ್ಯೆಯಿಂದ ಭಾರತದ ಇಂಡಿಗೋ, ಸ್ಪೈಸ್‌ಜೆಟ್ ಮತ್ತು ಆಕಾಶ ಏರ್ ಬುಕಿಂಗ್, ಚೆಕ್-ಇನ್ ಮತ್ತು ಫ್ಲೈಟ್ ನವೀಕರಣಗಳ ಸೇವೆ ಮೇಲೆ ಪರಿಣಾಮ ಬೀರಿದೆ. ದೆಹಲಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣದಲ್ಲೂ ಸಮಸ್ಯೆ ತಲೆದೋರಿದೆ.
ಲಂಡನ್ ಸ್ಟಾಕ್ ಎಕ್ಸ್‌ಚೇಂಜ್ ಸೇವೆಯಲ್ಲೂ ವ್ಯತ್ಯಯವಾಗಿದೆ. ಸ್ಕೈ ನ್ಯೂಸ್, ಆಸ್ಟ್ರೇಲಿಯಾದ ಎಬಿಸಿ ನ್ಯೂಸ್ ಪ್ರಸಾರ ಸ್ಥಗಿತಗೊಂಡಿದೆ. ಬ್ರಿಟನ್‌ನಲ್ಲೂ ರೈಲು ಸೇವೆ ಸ್ಥಗಿತವಾಗಿದೆ. ಭಾರತದ ಐಟಿ ಇಲಾಖೆಯಿಂದ ಮೈಕ್ರೋಸಾಫ್ಟ್ ಸಂಸ್ಥೆ ಜೊತೆ ಸಂಪರ್ಕ ಸಾಧಿಸಲಾಗುತ್ತಿದೆ