ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹತ್ತು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ಬೆಳೆಗಳಿಗೆ ಸಾಕಷ್ಟು ಹಾನಿಯೂ ಸಂಭವಿಸಿದೆ, ಇದರ ಜೊತೆಗೆ ಇನ್ನಿತರ ಕಾರಣಗಳಿಂದಾಗಿ ತರಕಾರಿ ಬೆಲೆ ಗಗನಕ್ಕೇರಿದ್ದು, ಮಧ್ಯಮ ವರ್ಗದ ಜನರಿಗೆ ಬಿಸಿ ಮುಟ್ಟಿದೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ತರಕಾರಿ ಬೆಲೆ ಬಹಳ ದುಬಾರಿಯಾಗಿದೆ. ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಾಗಿ ಇದ್ದಿದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಫಸಲು ಬಂದಿಲ್ಲ. ಈ ಮಧ್ಯೆ ಕಳೆದ ಒಂದು ವಾರದಿಂದ ಮಳೆಯು ಬರುತ್ತಿದ್ದು, ಬಂದಂತಹ ಬೆಳೆಯು ಹಾಳಾಗುತ್ತಿದೆ. ಹೀಗಾಗಿ ಬರುವ ಅಲ್ಪ ತರಕಾರಿಗಳಿಗೆ ಹೆಚ್ಚಿನ ಬೆಲೆ ನಿಗದಿ ಮಾಡಿ ಮಾರಾಟ ಮಾಡಲಾಗುತ್ತಿದೆ.
ಇನ್ನು ಹೊಸ ಬೆಳೆ ಬರುವವರೆಗೂ ಬೆಲೆ ಇದೇ ರೀತಿ ಹೆಚ್ಚಾಗುವ ಸಾಧ್ಯಾತೆ ಇದ್ದು, ಮುಂದಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದಿದ್ದರೆ ತರಕಾರಿಗಳ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಬೀನ್ಸ್ ಬೆಲೆ ಕೆಜಿಗೆ 235, ಬೆಳ್ಳುಳ್ಳಿ ಬೆಲೆ ಕೆಜಿಗೆ 318 ರೂಪಾಯಿ ಹಾಗೂ ಇನ್ನಿತರ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ.