April 15, 2026
Wednesday, April 15, 2026
spot_img

ಮಧ್ಯಪ್ರಾಚ್ಯ ಉದ್ವಿಗ್ನತೆ: ಮಾತುಕತೆಯ ಮೂಲಕವೇ ಪರಿಹಾರ ಸಾಧ್ಯ ಎಂದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಭಾರತ ಶಾಂತಿ ಮತ್ತು ಸಂವಾದಕ್ಕೆ ಒತ್ತು ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಶಮನಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು.

ನಾಗರಿಕರು ಹಾಗೂ ಮೂಲಸೌಕರ್ಯಗಳ ಮೇಲಿನ ದಾಳಿಗಳು ಅಸ್ವೀಕಾರಾರ್ಹ ಎಂದು ಖಂಡಿಸಿದ ಪ್ರಧಾನಿ, ಹಾರ್ಮುಜ್ ಜಲಸಂಧಿ ಮುಕ್ತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಜಾಗತಿಕ ವ್ಯಾಪಾರಕ್ಕೆ ಮಹತ್ವದ ಈ ಮಾರ್ಗದಲ್ಲಿ ಅಡಚಣೆ ಉಂಟಾದರೆ, ಇಂಧನ ಮತ್ತು ಅಗತ್ಯ ವಸ್ತುಗಳ ಸರಬರಾಜು ತೊಂದರೆಗೆ ಒಳಗಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:

ಸಂಘರ್ಷದ ಪರಿಣಾಮವಾಗಿ ಕಚ್ಚಾ ತೈಲ, ಅನಿಲ ಹಾಗೂ ರಸಗೊಬ್ಬರ ಸಾಗಣೆ ಸವಾಲಿನದ್ದಾಗಿದ್ದು, ಭಾರತವು ಈ ಸರಕುಗಳ ನಿರಂತರ ಪೂರೈಕೆಗೆ ಕ್ರಮ ಕೈಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಹಡಗುಗಳು ಭಾರತ ತಲುಪಿದ್ದು, ಮುಂದುವರೆದೂ ಈ ಪ್ರಯತ್ನಗಳು ನಡೆಯಲಿವೆ ಎಂದರು.

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆಯಾಗಿದೆ. ಈಗಾಗಲೇ ಲಕ್ಷಾಂತರ ಭಾರತೀಯರನ್ನು ಸುರಕ್ಷಿತವಾಗಿ ವಾಪಸು ಕರೆತರಲಾಗಿದೆ.ಈ ಪರಿಸ್ಥಿತಿಯಲ್ಲಿ ಜಾಗತಿಕ ಶಾಂತಿ ಸಾಧನೆಗೆ ಎಲ್ಲ ರಾಷ್ಟ್ರಗಳು ಸಂವಾದದ ಮಾರ್ಗವನ್ನು ಅನುಸರಿಸಬೇಕು ಎಂಬುದು ಭಾರತದ ನಿಲುವಾಗಿದೆ ಎಂದು ಪ್ರಧಾನಿ ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !