ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿ, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿ ಜೊತೆಯಾಗಿ ಸಿಎಂ ನಿವಾಸಕ್ಕೆ ಆಗಮಿಸಿದ್ದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಿಪಿ ಯೋಗೇಶ್ವರ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.