Friday, September 22, 2023

Latest Posts

ಬೆಂಗಳೂರಿಗೆ ಮಧ್ಯರಾತ್ರಿ ಸ್ಪಂದನಾ ಪಾರ್ಥಿವ ಶರೀರ: ಮಲ್ಲೇಶ್ವರದಲ್ಲಿ ಅಂತಿಮ ದರುಶನಕ್ಕೆ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಥಾಯ್ಲೆಂಡ್‌ ನಲ್ಲಿ ಹಠಾತ್‌ ಹೃದಯಾಘಾತದಿಂದ (Sudden Cardiac Arrest) ನಿಧನರಾದ ನಟ ವಿಜಯ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ವಿಜಯ ರಾಘವೇಂದ್ರ (Spandana Vijay Raghavendra) ಅವರ ಪಾರ್ಥಿವ ಶರೀರ ಥಾಯ್ ಏರ್ ವೇಸ್‌ಗೆ (Thai Airways) ಸೇರಿದ ವಿಮಾನದಲ್ಲಿ ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International airport) ಆಗಮಿಸಲಿದೆ.

ಕಳೆದ ಭಾನುವಾರ ರಾತ್ರಿ ಕುಸಿದು ಬಿದ್ದು ಮೃತಪಟ್ಟಿದ್ದ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬ್ಯಾಂಕಾಕ್‌ನ ಆಸ್ಪತ್ರೆಯಲ್ಲಿ ಮುಕ್ತಾಯಗೊಂಡು ದಾಖಲೆಗಳ ವಿನಿಮಯ ನಡೆದಿದೆ.
ಥಾಯ್ಲೆಂಡ್‌ ಟು ಬೆಂಗಳೂರು ವಿಮಾನ ಆಗಲೇ ಬ್ಯಾಂಕಾಕ್‌ನಿಂದ ಹೊರಟಿದ್ದು, ಮಧ್ಯರಾತ್ರಿ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ವಿಮಾನ ನಿಲ್ದಾಣದ WFS ಏರ್ ಕಾರ್ಗೋ ಟರ್ಮಿನಲ್‌ಗೆ ಮೃತದೇಹವನ್ನು ತರಲಾಗುತ್ತದೆ.

ನಿಯಮಾನುಸಾರ ಮೃತದೇಹ ಸ್ಕ್ಯಾನ್ ಮಾಡಿ ದಾಖಲೆ ಪರಿಶೀಲನೆ ಮಾಡಲಿರುವ ಅಧಿಕಾರಿಗಳು, ಬಳಿಕ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಲಿದ್ದಾರೆ. ಕಸ್ಟಮ್ಸ್ ಕ್ಲಿಯರೆನ್ಸ್ ಆದ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ನಡೆಯಲಿದೆ.

ಬಳಿಕ ಪಾರ್ಥಿವ ಶರೀರವನ್ನು ಮಲ್ಲೇಶ್ವರದಲ್ಲಿರುವ ಬಿಕೆ ಶಿವರಾಂ ಅವರ ಮನೆಗೆ (No.34, 4ನೇ ದೇವಸ್ಥಾನ ರಸ್ತೆ, 15ನೇ ಅಡ್ಡರಸ್ತೆ, ಮಲ್ಲೇಶ್ವರ) ತರಲಾಗುತ್ತದೆ. ಮಧ್ಯರಾತ್ರಿಯಿಂದ ಬುಧವಾರ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರುಶಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ನಗರದ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಈಡಿಗ ಸಮುದಾಯದ ವಿಧಿವಿಧಾನದಂತೆ ಅಂತ್ಯಕ್ರಿಯೆ ನೇರವೇರಿಸಲಾಗುವುದು ಎಂದು ಕುಟುಂಬದ ಪ್ರಕಟಣೆ ತಿಳಿಸಿದೆ.

ಪಾರ್ಥಿವ ಶರೀರದ ಆಗಮನ ಮತ್ತು ಅಂತಿಮದರುಶನಕ್ಕೆ ಸಂಬಂಧಿಸಿ ಬಿ.ಕೆ. ಶಿವರಾಂ ಅವರ ಮನೆಯ ಪರಿಸರದಲ್ಲಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಈಗಾಗಲೇ ಬಂಧುಗಳು, ಕುಟುಂಬಿಕರು ಮನೆಗೆ ಆಗಮಿಸಿದ್ದಾರೆ. ಬ್ಯಾರಿಕೇಡ್, ಟೇಬಲ್, ಕುರ್ಚಿಗಳನ್ನು ಹಾಕಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಬಿ.ಕೆ ಹರಿಪ್ರಸಾದ್ ಹಾಗೂ ಶ್ರೀಮುರುಳಿ ಅವರು ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.

ಸಾರ್ವಜನಿಕರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸುವುದಕ್ಕೂ ಅವಕಾಶ ನೀಡಲಾಗಿದ್ದು, ಯಾವುದೇ ಒತ್ತಡವಿಲ್ಲದೆ ಅಂತಿಮ ದರುಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಿತ್ರನಟರು, ವಿಜಯ ರಾಘವೇಂದ್ರ ಅಭಿಮಾನಿಗಳು, ರಾಜಕಾರಣಿಗಳು ಆಗಮಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!