ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ವಲಸೆ ಕಾರ್ಮಿಕನ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಬಿಹಾರದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ದಾಳಿಯು ಗುರುವಾರ ಮಧ್ಯರಾತ್ರಿಯ ಸುಮಾರಿಗೆ ನಡೆದಿದೆ. ಭಯೋತ್ಪಾದಕರು ಬಿಹಾರದ ಸೋದ್ನಾರಾ ಮಾಧೇಪುರ ಮೂಲದ ಕಾರ್ಮಿಕ ಮೊಹಮ್ಮದ್ ಅಮ್ರೇಜ್ ಎಂಬುವವರ ಮಗ ಮೊಹಮ್ಮದ್ ಜಲೀಲ್ ಎಂಬಾತನ ಮೇಲೆ ಗುಂಡುಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಅಮ್ರೇಜ್ ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!