January16, 2026
Friday, January 16, 2026
spot_img

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದರೆ ವಲಸೆ ಕಾರ್ಮಿಕರಿಗೆ ಹಿಂಸೆ: ಮಮತಾ ಬ್ಯಾನರ್ಜಿ ಆರೋಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳದ ವಲಸೆ ಕಾರ್ಮಿಕರನ್ನು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಹಿಂಸಿಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಉತ್ತರ ಬಂಗಾಳದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದಲ್ಲಿ ಗಲಭೆಯನ್ನು ಪ್ರಚೋದಿಸಲು ಯೋಜಿಸುತ್ತಿದೆ. ಏಕೆಂದರೆ ಪಕ್ಷ 2026 ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಬಿಜೆಪಿ ಅರಿತುಕೊಂಡಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಹೊರಗೆ ವಲಸೆ ಕಾರ್ಮಿಕರ ಮೇಲಿನ ದಾಳಿಯ ಕುರಿತು ಮುರ್ಷಿದಾಬಾದ್‌ನ ಬೆಲ್ಡಂಗಾದಲ್ಲಿ ನಡೆದ ಪ್ರತಿಭಟನೆಯನ್ನು ಉಲ್ಲೇಖಿಸಿ, ಅಲ್ಪಸಂಖ್ಯಾತ ಸಮುದಾಯದ ಕೋಪವು ನ್ಯಾಯಯುತವಾಗಿದೆ ಎಂದು ಅವರು ಹೇಳಿದರು.

ವಲಸೆ ಕಾರ್ಮಿಕರ ವಿರುದ್ಧ ಪದೇ ಪದೇ ನಡೆಯುತ್ತಿರುವ ಹಿಂಸಾಚಾರದ ಘಟನೆಗಳಿಂದ ಈ ಪ್ರತಿಭಟನೆ ಉಂಟಾಗಿದೆ.ಆದ್ರೆ ನಾವು ಅವರ ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಅವರು ಹೇಳಿದರು.

ಇತರ ರಾಜ್ಯಗಳಲ್ಲಿ ಜಿಲ್ಲೆಯಿಂದ ವಲಸೆ ಬಂದ ಕಾರ್ಮಿಕರ ಮೇಲೆ ನಡೆದ ದಾಳಿಗಳನ್ನು ವಿರೋಧಿಸಿ ಮುರ್ಷಿದಾಬಾದ್‌ನ ಸ್ಥಳೀಯರು ಶುಕ್ರವಾರ ರಾಷ್ಟ್ರೀಯ ಹೆದ್ದಾರಿ 12 ನ್ನು ತಡೆದು ಟೈರ್‌ಗಳನ್ನು ಸುಟ್ಟು ರಸ್ತೆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯಿಂದ ವಲಸೆ ಬಂದವರು ಬಂಗಾಳಿ ಮಾತನಾಡುವುದಕ್ಕಾಗಿ ಇತರ ರಾಜ್ಯಗಳಲ್ಲಿ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Must Read

error: Content is protected !!