ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ಮಿಲಿಂದ್‌ ದಿಯೋರಾ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ನಾಯಕ ಮಿಲಿಂದ್‌ ದಿಯೋರಾ ಅವರು, ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದಿಯೋರಾ ಅವರು, ಬಹುಶಃ ಶೀಘ್ರದಲ್ಲೇ ಸಿಎಂ ಏಕನಾಥ್‌ ಶಿಂದೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಳ್ಳುವ ಸಾಧ್ಯತೆಗಳನ್ನು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ನಾಯಕ ದಿಯೋರಾ ಈ ಮಾಹಿತಿಯನ್ನು ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ತಮ್ಮ 55 ವರ್ಷಗಳ ಬಾಂಧವ್ಯವನ್ನು ಕೊನೆಗೊಳಿಸಿದ್ದಾರೆ. ಅವರು ಎಲ್ಲ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆಯನ್ನು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!