ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಿಲಿಂದ್ ದಿಯೋರಾ ಶಿವಸೇನೆಗೆ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಹಿರಿಯ (Congress) ನಾಯಕ ಮಿಲಿಂದ್ ದಿಯೋರಾ (Milind Deora) ಭಾನುವಾರ ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರ ಸಮ್ಮುಖದಲ್ಲಿ ಶಿವಸೇನಾ (Shivsena) ಸೇರಿದ್ದಾರೆ.

ಶಿವಸೇನಾಗೆ ಸೇರುವ ಮೊದಲು ಕಾಂಗ್ರೆಸ್ ನಾಯಕ ದಿಯೋರಾ, ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯವಾಗಿದೆ. ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ. ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ವರ್ಷಗಳಲ್ಲಿ ಅವರ ಅಚಲ ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದರು.

ಭಾನುವಾರ ಮಧ್ಯಾಹ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಧಿಕೃತ ನಿವಾಸಕ್ಕೆ ಬಂದ ದಿಯೋರಾ, ಮುಂಬೈನಲ್ಲಿ ಸಿಎಂ ಸಮ್ಮುಖದಲ್ಲಿ ಆಡಳಿತ ಪಕ್ಷಕ್ಕೆ ಸೇರ್ಪಡೆಯಾದರು.

ಸೇನಾಗೆ ಸೇರ್ಪಡೆಯಾದ ನಂತರ ಮಾತನಾಡಿದ ಮಿಲಿಂದ್ ದಿಯೋರಾ, ಇದು ನನಗೆ ತುಂಬಾ ಭಾವನಾತ್ಮಕ ದಿನವಾಗಿದೆ. ನಾನು ಕಾಂಗ್ರೆಸ್ ತೊರೆಯುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ಇಂದು ನಾನು ಶಿವಸೇನಾಗೆ ಸೇರಿದ್ದೇನೆ. ಕಾಂಗ್ರೆಸ್ ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಹಳೆಯ ಸಂಬಂಧವನ್ನು ನಾನು ಏಕೆ ಕಡಿದುಕೊಂಡಿದ್ದೇನೆ ಎಂದು ಬೆಳಿಗ್ಗೆಯಿಂದ ನನಗೆ ಸಾಕಷ್ಟು ಫೋನ್ ಕರೆಗಳು ಬರುತ್ತಿವೆ ನಾನು ಪಕ್ಷಕ್ಕೆ ನಿಷ್ಠನಾಗಿದ್ದೆ. ದುರದೃಷ್ಟವಶಾತ್, ಇಂದಿನ ಕಾಂಗ್ರೆಸ್ 1968 ಮತ್ತು 2004 ರ ಕಾಂಗ್ರೆಸ್‌ಗಿಂತ ಬಹಳ ಭಿನ್ನವಾಗಿದೆ. ಕಾಂಗ್ರೆಸ್ ಮತ್ತು ಯುಬಿಟಿ ರಚನಾತ್ಮಕ ಮತ್ತು ಸಕಾರಾತ್ಮಕ ಸಲಹೆಗಳು ಮತ್ತು ಅರ್ಹತೆ ಮತ್ತು ಸಾಮರ್ಥ್ಯಕ್ಕೆ ಪ್ರಾಮುಖ್ಯತೆ ನೀಡಿದ್ದರೆ, ಏಕನಾಥ್ ಶಿಂಧೆ ಮತ್ತು ನಾನು ಇಲ್ಲಿ ಇರುತ್ತಿರಲಿಲ್ಲ. ಶಿಂಧೆ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿತ್ತು, ನಾನು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿತ್ತು ಎಂದಿದ್ದಾರೆ.

ಮಿಲಿಂದ್ ದಿಯೋರಾ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದೇಕೆ? ಮಿಲಿಂದ್ ದಿಯೋರಾ ಅವರು ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಎರಡು ಬಾರಿ ಸಂಸದರಾಗಿದ್ದಾರೆ. 2019ರಲ್ಲಿ ಉದ್ಧವ್ ಬಣದ ಸಂಸದ ಅರವಿಂದ್ ಸಾವಂತ್ ಗೆದ್ದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!