ರಜೌರಿಯಲ್ಲಿ ಉಗ್ರರ ದಾಳಿ: ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.
ಡ್ರ್ಯಾಂಗ್ರಿ ಪ್ರದೇಶದಲ್ಲಿನ ಮನೆಗಳ ಮೇಲೆ ಉಗ್ರರು ದಾಳಿ ಮಾಡಿದ್ದು, ಮೃತರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಉಗ್ರರನ್ನು ಸದೆಬಡೆಯಲು ಕಾರ್ಯಾಚರಣೆ ಆರಂಭವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಉಗ್ರರು ಡ್ಯಾಂಗ್ರಿ ಪ್ರದೇಶದಲ್ಲಿ ಮೂರು ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಇನ್ನೂ ಉಗ್ರರು ಸಿಕ್ಕಿಬಿದ್ದಿಲ್ಲ, ಭದ್ರತಾ ಪಡೆಗಳು ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿವೆ. ದಾಳಿ ನಡೆದ ಪ್ರದೇಶವನ್ನು ಸಿಆರ್‌ಪಿಎಫ್ ಸೇನಾ ಪಡೆಗಳು ಸುತ್ತುವರಿದಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!