ಶ್ರೀನಗರದಲ್ಲಿ ಉಗ್ರರ ಗ್ರೆನೇಡ್ ದಾಳಿ: ಒಬ್ಬ ನಾಗರಿಕ ಸಾವು, 24 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರೀನಗರದ ಅಮಿರಾ ಕಾಡಲ್ ಸೇತುವೆಯ ಜನನಿಬಿಡ ಮಾರುಕಟ್ಟೆಯಲ್ಲಿ ಉಗ್ರರ ಗ್ರೆನೇಡ್ ದಾಳಿಗೆ ನಾಗರಿಕರೊಬ್ಬರು ಸಾವನ್ನಪ್ಪಿದ್ದು, ಸುಮಾರು 24 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಿನವರು ನಾಗರಿಕರಾಗಿದ್ದಾರೆ ಎನ್ನಲಾಗ್ತಿದೆ.
ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕ ರಾಕೇಶ್ ಬಲಾವಾಲ್ ಮಾಹಿತಿ ನೀಡಿದ್ದು, 70 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.
ರ್ತವ್ಯದಲ್ಲಿದ್ದ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತಿಳಿಸಿದೆ.
ಸ್ಫೋಟದಲ್ಲಿ ಒಬ್ಬ ಪೊಲೀಸ್ ಮತ್ತು ಕೆಲವು ನಾಗರಿಕರಿಗ ಗಾಯಗಳಾಗಿವೆ ಎಂದು ಅವರು ಹೇಳಿದ್ದು, ಗಾಯಗೊಂಡವರನ್ನು ಶ್ರೀ ಮಹಾರಾಜ ಹರಿ ಸಿಂಗ್ (SMHS) ಆಸ್ಪತ್ರೆದೆ ದಾಖಲಿಸಲಾಗಿದೆ.ಎಲ್ಲಾ ಗಾಯಾಳುಗಳ ಗುರುತುಗಳು ಇನ್ನೂ ನಮಗೆ ಲಭ್ಯವಾಗಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!