ರಾಜ್ಯ ಬಿಜೆಪಿ ಕಚೇರಿ ಮೇಲೆ ಉಗ್ರರ ಕೆಂಗಣ್ಣು: ಸೆಕ್ಯುರಿಟಿ ಇನ್ನಷ್ಟು ಟೈಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಸಲ್ಲಿಸಿರುವ ಚಾರ್ಜ್‌ಶೀಟ್ ನಲ್ಲಿ ರಾಜ್ಯ ಬಿಜೆಪಿ ಕಚೇರಿ ಮೇಲೆ ಉಗ್ರರು ಕೆಂಗಣ್ಣು ಬೀರಿರುವುದು ಬಹಿರಂಗವಾಗುತ್ತಿದ್ದಂತೆಯೇ ಇತ್ತ ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಗೃಹ ಇಲಾಖೆ ಸೂಚನೆ ಮೇರೆಗೆ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ನಗರದಲ್ಲಿರುವ ಬಿಜೆಪಿ ಕಚೇರಪಿಗೆ ಮೆಟಲ್ ಡಿಟೆಕ್ಟರ್, ಬಿಗಿ ತಪಾಸಣೆ, ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕಚೇರಿ ಪ್ರವೇಶಿಸುವವರು ಈ ಮೆಟಲ್ ಡಿಟೆಕ್ಟರ್ ಮೂಲಕವೇ ಪ್ರವೇಶಿಸುವಂತೆ ಸೂಚಿಸಲಾಗಿದೆ. ಜೊತೆಗೆ ನಿತ್ಯ ಮಲ್ಲೇಶ್ವರ ಪೊಲೀಸ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ನಿಗಾ ವಹಿಸುವಂತೆಯೂ ಸೂಚಿಸಲಾಗಿದೆ.

ಬ್ರೂಕ್‌ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಶಂಕಿತ ಉಗ್ರರು ಬಿಜೆಪಿ ರಾಜ್ಯ ಘಟಕದ ಕಚೇರಿಯನ್ನೂ ಗುರಿಯಾಗಿಸಿಕೊಂಡಿದ್ದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಜೆಪಿ ಕಚೇರಿಗೆ ಭದ್ರತೆ ಒದಗಿಸಿದ್ದಾರೆ.

ಬಿಜೆಪಿ ಕಚೇರಿ ಮುಂಭಾಗ ಕೆಎಸ್‌ಆರ್‌ಪಿ ವಾಹನ (20 ಸಿಬ್ಬಂದಿ) ನಿಯೋಜಿಸಲಾಗಿದ್ದು, ಪಕ್ಷದ ವತಿಯಿಂದ ಆರು ಮಂದಿ ಖಾಸಗಿ ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ. ಕಚೇರಿ ಸುತ್ತಲೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳನ್ನು ಕಂಡರೆ ತಕ್ಷಣ ಮಾಹಿತಿ ನೀಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಕಚೇರಿಗೆ ಬರುವವರಲ್ಲಿ ಕಾರ್ಯಕರ್ತರು, ಮುಖಂಡರು ಯಾರು ಎಂಬುದನ್ನು ಗುರುತಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!