ಹೊಸದಿಗಂತ ಡಿಜಿಟಲ್ ಡೆಸ್ಕ್
ಅಫ್ಘಾನಿಸ್ತಾನದ ಉಗ್ರರು ಪಾಕ್- ಅಫ್ಘಾನಿಸ್ತಾನದ ಗಡಿಯಲ್ಲಿ ಪಾಕಿಸ್ತಾನದ ಸೇನಾ ಚೆಕ್ ಪೋಸ್ಟ್ ಗಳ ಮೇಲೆ ದೊಡ್ಡಪ್ರಮಾಣದ ಶೆಲ್ ದಾಳಿ ನಡೆಸಿ ಮೂವರು ಸೈನಿಕರನ್ನು ಹತ್ಯೆಗೈದಿದ್ದಾರೆ.
ಪಾಕ್ ಮತ್ತು ಅಘಾನಿಸ್ತಾನದ ತಾಲೀಬಾನ್ ಆಡಳಿತದ ನಡುವೆ ಇತ್ತೀಚಿನ ದಿನಗಳಲ್ಲಿ ವೈಮನಸ್ಸು ಕಾಣಿಸಿಕೊಂಡಿದೆ. ಏಪ್ರಿಲ್ 17ರ ರಾತ್ರಿ ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಕುನಾರ್ ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಪಾಕ್ ಸೇನಾ ಪಡೆ ಬೃಹತ್ ವೈಮಾನಿಕ ದಾಳಿ ನಡೆಸಿತ್ತು. ಈ ವೇಳೆ ರಾಕೆಟ್ ದಾಳಿಯಲ್ಲಿ ಮಕ್ಕಳು ಸೇರಿದಂತೆ ಅಘ್ಘಾನಿಸ್ತಾನದ 40ಕ್ಕೂ ಹೆಚ್ಚು ನಾಗರಿಕರು ಬಲಿಯಾಗಿದ್ದರು. ಈ ದಾಳಿಗೆ ಪ್ರತಿಕಾರವಾಗಿ ಪಾಕ್ ಸೈನಿಕರ ಮೇಲೆ ಉಗ್ರರಿಂದ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಪಾಕಿಸ್ತಾನದ ಉತ್ತರ ವಜೀರಿಸ್ತಾನ್ ಪ್ರದೇಶದಲ್ಲಿನ ಸೇನಾ ಪೋಸ್ಟ್‌ನತ್ತ ಭಯೋತ್ಪಾದಕರು ಗುಂಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿ ಸೈನಿಕರನ್ನು ಹತ್ಯೆಗೈದಿದ್ದಾರೆ ಎಂದು ಪಾಕ್ ಸೇನೆ ಹೇಳಿಕೆ ನೀಡಿದೆ.
ಭಯೋತ್ಪಾದಕರು ಅಫ್ಘಾನಿಸ್ತಾನದ ನೆಲವನ್ನು ತನ್ನ ವಿರುದ್ಧದ ಚಟುವಟಿಕೆಗಳಿಗೆ ಬಳಸುವುದನ್ನು ಪಾಕ್ ಬಲವಾಗಿ ಖಂಡಿಸುತ್ತದೆ. ಭವಿಷ್ಯದಲ್ಲಿ ಇಂತಹ ಚಟುವಟಿಕೆಗಳನ್ನು ಆಫ್ಘನ್ ತಡೆಯುತ್ತದೆ ಎಂದು ಆಶಿಸುತ್ತೇವೆ ಎಂದು ಪಾಕ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ