ಅರೆಸೈನಿಕ ಪಡೆಯ ಬಂಕರ್ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ: CRPF ಅಧಿಕಾರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಅರೆಸೈನಿಕ ಪಡೆಯ ಬಂಕರ್ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದು, ಸಿಆರ್ಪಿಎಫ್ ಅಧಿಕಾರಿ ಗಾಯಗೊಂಡಿದ್ದಾರೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನ ಬಂಕರ್ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಸಬ್ ಇನ್ಸ್ಪೆಕ್ಟರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಅಧಿಕಾರಿಯನ್ನು 161 ಬೆಟಾಲಿಯನ್ ನ ಪರ್ವೇಜ್ ರಾಣಾ ಎಂದು ಗುರುತಿಸಲಾಗಿದೆ.
ಅವರನ್ನು ಹತ್ತಿರದ ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಈ ದಾಳಿಯ ನಂತರ ತಕ್ಷಣ ಪೊಲೀಸರು ಮತ್ತು ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದವು ಮತ್ತು ದಾಳಿಕೋರರನ್ನು ಬಂಧಿಸಲು ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!