Friday, June 2, 2023

Latest Posts

ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವೈಮಾನಿಕ ದಾಳಿ : 100 ಮಂದಿ ಮೃತ್ಯು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ಭೀಕರ ದಾಳಿಯನ್ನು ವಿಶ್ವಸಂಸ್ಥೆ, ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಬಲವಾಗಿ ವಿರೋಧಿಸಿವೆ.

ಮ್ಯಾನ್ಮಾರ್‌ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ಮಾಡುತ್ತಿದೆ.

ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!