ಮ್ಯಾನ್ಮಾರ್ ನಲ್ಲಿ ಮಿಲಿಟರಿ ವೈಮಾನಿಕ ದಾಳಿ: 60 ಕ್ಕೂ ಹೆಚ್ಚು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮ್ಯಾನ್ಮಾರ್ ನಲ್ಲಿ ಜನಾಂಗೀಯ ಅಲ್ಪಸಂಖ್ಯಾತ ಗುಂಪಿನ ಜನರು ನಡೆಸಿದ ಸಂಗೀತ ಕಾರ್ಯಕ್ರಮದ ವೇಳೆ ನಡೆದ ವೈಮಾನಿಕ ದಾಳಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕಚಿನ್ ಜನಾಂಗೀಯ ಅಲ್ಪಸಂಖ್ಯಾತರ ಸಂಘಟನೆಯ ವಾರ್ಷಿಕೋತ್ಸವದ ಆಚರಣೆಯಲ್ಲಿ ಮ್ಯಾನ್ಮಾರ್‌ ಮಿಲಿಟರಿಯ ವೈಮಾನಿಕ ದಾಳಿಗಳು ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಬಾಗವಹಿಸಿದ ಗಾಯಕರು ಮತ್ತು ಸಂಗೀತಗಾರರು ಸೇರಿದಂತೆ ಅನೇಕರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

ಉತ್ತರ ರಾಜ್ಯವಾದ ಕಚಿನ್‌ನಲ್ಲಿ ಕಚಿನ್ ಇಂಡಿಪೆಂಡೆನ್ಸ್ ಆರ್ಗನೈಸೇಶನ್ ಭಾನುವಾರ ರಾತ್ರಿ ಹಬ್ಬದ ಆಚರಣೆಯಲ್ಲಿ ಈ ಘಟನೆ ಸಂಭವಿಸಿದೆ. ಆಂಗ್ ಸಾನ್ ಸೂಕಿಯವರ ಚುನಾಯಿತ ಸರ್ಕಾರದಿಂದ ಕಳೆದ ವರ್ಷ ಫೆಬ್ರವರಿಯಲ್ಲಿ ಮಿಲಿಟರಿ ಅಧಿಕಾರವನ್ನು ವಶಪಡಿಸಿಕೊಂಡ ನಂತರ, ಒಂದೇ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದವರ ಹೆಚ್ಚು.ಸಂಖ್ಯೆ ಜನರು ಸಾವನ್ನಪ್ಪಿರುವ ಘಟನೆ ಇದಾಗಿದೆ.

ಘಟನೆ ಸಂಬಂಧ ಮ್ಯಾನ್ಮಾರ್‌ನಲ್ಲಿರುವ ವಿಶ್ವಸಂಸ್ಥೆ (ಯುಎನ್) ಕೂಡ ಕಳವಳ ವ್ಯಕ್ತಪಡಿಸಿದೆ. ಈ ದಾಳಿಯಲ್ಲಿ ಮೃತಪಟ್ಟ ಅಥವಾ ಗಾಯಗೊಂಡ ಎಲ್ಲರ ಕುಟುಂಬಗಳು ಮತ್ತು ಸ್ನೇಹಿತರಿಗೆ ನಾವು ನಮ್ಮ ಆಳವಾದ ಸಂತಾಪವನ್ನು ಸೂಚಿಸಿದ್ದು, ಗಾಯಗೊಂಡವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ಪಡೆಯಲು ಯುಎನ್ ಕರೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!