ಮಿಲಿಟರಿ ಹೆಲಿಕಾಪ್ಟರ್ ಪತನ: ಕೀನ್ಯಾ ರಕ್ಷಣಾ ಮುಖ್ಯಸ್ಥ ಜ. ಒಗೊಲ್ಲಾ ಸಹಿತ ಒಂಬತ್ತು ಅಧಿಕಾರಿಗಳ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೀನ್ಯಾ ರಕ್ಷಣಾ ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಸೇರಿದಂತೆ ಒಂಬತ್ತು ಮಂದಿ ಉನ್ನತ ಅಧಿಕಾರಿಗಳು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಈ ಘಟನೆಯನ್ನು ಕೀನ್ಯಾ ಅಧ್ಯಕ್ಷ ವಿಲಿಯಂ ರುಟೊ ಸ್ಪಷ್ಟಪಡಿಸಿದ್ದಾರೆ. ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಸಂಭವಿಸಿದ್ದು, ರಾಜಧಾನಿ ನೈರೋಬಿಯ ವಾಯುವ್ಯಕ್ಕೆ 400 ಕಿಲೋಮೀಟರ್ ದೂರದಲ್ಲಿರುವ ಎಲ್ಜಿಯೊ ಮರಕ್ವೆಟ್ ಕೌಂಟಿ ಪರಿಸರದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಈ ಅವಘಡಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ವಾಯುಪಡೆಯು ತನಿಖಾ ತಂಡ ಸ್ಥಳಕ್ಕೆ ಧಾವಿಸಿದೆ.

ವಾಯುಪಡೆಯ ಕಮಾಂಡರ್ ಮತ್ತು ರಕ್ಷಣಾ ಪಡೆಗಳ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಂತರ ಕಳೆದ ವರ್ಷದ ಏಪ್ರಿಲ್‌ನಲ್ಲಿ ಒಗೊಲ್ಲಾ ಕೀನ್ಯಾ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!