ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಮಿಲಿಟರಿ ಹೆಲಿಕಾಪ್ಟರ್ ಪತನವಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ.
ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಈ ಹೆಲಿಕಾಪ್ಟರ್ ಗಸ್ತು ತಿರುಗುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಗೊಂಡಿದ್ದು, ಸಮುದ್ರಕ್ಕೆ ಅಪ್ಪಳಿಸಿದೆ ಎಂದು ಕತಾರ್‌ನ ಸಚಿವಾಲಯ ಮಾಹಿತಿ ನೀಡಿದೆ.
ಈ ಹೆಲಿಕಾಪ್ಟರ್‌ನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಆರು ಜನರು ಸಾವನ್ನಪ್ಪಿದ್ದಾರೆ, ಓರ್ವ ನಾಪತ್ತೆಯಾಗಿದ್ದು, ಆತನ ಶೋಧ ಕಾರ್ಯ ಮುಂದುವರಿದಿದೆ.



