ಶೀಘ್ರದಲ್ಲೇ ಹಾಲಿನ ದರ ಏರಿಕೆ? 5 ರೂ. ಹೆಚ್ಚಿಸುವಂತೆ KMF​ಗೆ ರೈತರಿಂದ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಬಜೆಟ್ ನಂತರ ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸುವ ಸಾಧ್ಯತೆ ಇದೆ. ಪಶುಸಂಗೋಪನಾ ಸಚಿವರು ಮತ್ತು ಕೆಎಂಎಫ್ ಅಧಿಕಾರಿಗಳ ನಡುವೆ ಈಗಾಗಲೇ ಚರ್ಚೆಯಾಗಿದೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ರೈತರು ಹಾಗೂ ಹಾಲು‌ ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್​ಗೆ ಮನವಿ ಮಾಡಿದ್ದವು.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!