ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಭಾನುವಾರ ತಿರುಮಲದ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಾಂಪ್ರದಾಯಿಕ ಉಡುಗೆಯಲ್ಲಿ ದೇವರ ದರುಶನ ಪಡೆದ ಅವರು, ಈ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ:
ಶೇಷಾಚಲ ಪರ್ವತದ ಏಳನೇ ಶಿಖರದಲ್ಲಿರುವ ಈ ಪವಿತ್ರ ಕ್ಷೇತ್ರದಲ್ಲಿ ತಮನ್ನಾ ಭಕ್ತಿಭಾವದಿಂದ ಪೂಜೆ ಸಲ್ಲಿಸಿ, ವೆಂಕಟೇಶ್ವರ ಸ್ವಾಮಿಯ ಆಶೀರ್ವಾದ ಪಡೆದರು.
‘ಬಾಹುಬಲಿ’ ಸಿನಿಮಾದ ಮೂಲಕ ಜನಪ್ರಿಯತೆ ಪಡೆದ ತಮನ್ನಾ, ತಮ್ಮ ದೇವಸ್ಥಾನ ಭೇಟಿಯ ಫೋಟೋಗಳನ್ನು ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಹಂಚಿಕೊಂಡಿದ್ದಾರೆ.



