ಕುಸಿದ ತಂಡಕ್ಕೆ ಮಿಲ್ಲರ್ ಬಲ: ಆಸೀಸ್ ಗೆಲುವಿಗೆ 213 ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಡೇವಿಡ್ ಮಿಲ್ಲರ್ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ವಿಶ್ವಕಪ್ ಸೆಮಿಫೈನಲ್‌ನಲ್ಲಿ 212 ರನ್‌ ಗಳಿಸಿದೆ. ಇತ್ತ ಆಸೀಸ್ ಗೆಲುವಿಗೆ ಸುಲಭ ಗುರಿ ನೀಡಿದೆ.

ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ತೆಂಬಾ ಬವುಮಾ ಖಾತೆ ತೆರೆಯುವ ಮುನ್ನವೇ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್‌ ಒಪ್ಪಿಸಿದರು. ಇದರ ಬೆನ್ನಲ್ಲೇ ಇನ್‌ಫಾರ್ಮ್ ಬ್ಯಾಟರ್ ಕ್ವಿಂಟನ್ ಡಿ ಕಾಕ್(03) ಹಾಗೂ ರಾಸ್ಸಿ ವ್ಯಾನ್ ಡರ್ ಡುಸೇನ್(6) ಕೂಡಾ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

ಇನ್ನು ಏಯ್ಡನ್ ಮಾರ್ಕ್‌ರಮ್ ಕೇವಲ 10 ರನ್ ಬಾರಿಸಿ ಸ್ಟಾರ್ಕ್‌ಗೆ ಎರಡನೇ ಬಲಿಯಾದರು. ದಕ್ಷಿಣ ಆಫ್ರಿಕಾ ತಂಡವು 24 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ನಾಲ್ವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದರು.

ಕೇವಲ 24 ರನ್‌ಗೆ 4 ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ 5ನೇ ವಿಕೆಟ್‌ಗೆ ಹೆನ್ರಿಚ್ ಕ್ಲಾಸೇನ್ ಹಾಗೂ ಡೇವಿಡ್ ಮಿಲ್ಲರ್ ಜೋಡಿ 95 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಕ್ಲಾಸೇನ್‌ 48 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 47 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಒಂದು ಕಡೆ ಆರಂಭದಲ್ಲೇ ಅಗ್ರಕ್ರಮಾಂಕದ ಬ್ಯಾಟರ್‌ಗಳು ವಿಕೆಟ್ ಕೈಚೆಲ್ಲಿದ್ದರಿಂದ ತಂಡ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತು. ಹೀಗಿದ್ದೂ ಕ್ಲಾಸೇನ್ ಜತೆಗೆ ಮಿಲ್ಲರ್ 95 ರನ್ ಜತೆಯಾಟ ನಿಭಾಯಿಸಿದರು. ಇದಾದ ಬಳಿಕ 7ನೇ ವಿಕೆಟ್‌ಗೆ ಕೋಟ್ಜೀ ಜತೆಗೆ ಅಮೂಲ್ಯ 53 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಹೋರಾಟ ನಡೆಸಿದ ಡೇವಿಡ್ ಮಿಲ್ಲರ್ 115 ಎಸೆತಗಳನ್ನು ಎದುರಿಸಿ ಆಕರ್ಷಕ ಶತಕ ಸಿಡಿಸಿದರು. ಅಂತಿಮವಾಗಿ ಮಿಲ್ಲರ್ 116 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 101 ರನ್ ಗಳಿಸಿ ಪ್ಯಾಟ್ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!