ಹೊಸದಿಗಂತ ರಾಯಚೂರು :
ಇಂದು ಮಂತ್ರಾಲಯಕ್ಕೆ ಸಾಗರೋಪಾದಿಯಲ್ಲಿ ಭಕ್ತಸಮೂಹ ಹರಿದು ಬರುತ್ತಿದ್ದು. ಅಂದಾಜು ಎರಡು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿಗಳ ದರುಶನ ಪಡೆದಿರುವರೆಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿರುವುದರಿಂದಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಮಠದ ಆಡಳಿತ ಮಂಡಳಿ ನೋಡಿಕೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.