ಹೊಸದಿಗಂತ ವರದಿ,ಕೊಪ್ಪಳ:
ಹುಲಿಗಿಯ ಶ್ರೀಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಸೀಗೆ ಹುಣ್ಣಿಮೆ ಪ್ರಯುಕ್ತ ಶನಿವಾರ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ದೇವಸ್ಥಾನದಲ್ಲಿ ಬೆಳಿಗ್ಗೆ ಅಲಂಕಾರ, ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು. ಬೆಳಿಗ್ಗೆಯಿಂದಲೇ ರೈಲು, ಬಸ್ ಮತ್ತು ಲಘು ವಾಹನಗಳ ಮೂಲಕ ಬಂದ ಸಾವಿರಾರು ಭಕ್ತರು ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ಗಂಗಾ ಪೂಜೆ ಮತ್ತು ಜೋಗತಿಪೂಜೆ, ಹರಕೆ ತೀರಿಸಿ, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.