July 8, 2026
Wednesday, July 8, 2026
spot_img

ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆಗೆ ಬಂದ ಲಕ್ಷಾಂತರ ಅಭಿಮಾನಿಗಳು: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಅವರ ಅಂತಿಮ ಯಾತ್ರೆ ಗುವಾಹಟಿಯಲ್ಲಿ ನಡೆದಿದ್ದು, ಈ ವೇಳೆ ಲಕ್ಷಾಂತರ ಜನರು ಭಾಗಿಯಾಗಿದ್ದಾರೆ.

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪ್ರಕಾರ, ಗಾರ್ಗ್ ಅವರ ಅಂತಿಮ ಯಾತ್ರೆ ವೇಳೆ ಲಕ್ಷಾಂತರ ಜನರು ಭಾಗಿಯಾಗಿದ್ದರು. ಈ ಮೂಲಕ ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಮತ್ತು ರಾಣಿ ಎಲಿಜಬೆತ್ ಅವರಿಗೆ ನೀಡಿದಂತೆ ಇದು ಕೂಡ ಸ್ಮರಣೀಯ ವಿದಾಯ ಎಂದು ಗುರುತಿಸಲಾಗಿದೆ.

ಈ ಮೂಲಕ ವಿಶ್ವದಲ್ಲೇ ಅತೀ ಹೆಚ್ಚು ಜನರು ಸೇರಿದ 4ನೇ ಅಂತಿಮ ಯಾತ್ರೆ ಎಂದು ದಾಖಲೆ ನಿರ್ಮಿಸಿ, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದೆ.

ಅಭಿಮಾನಿಗಳು ಕಿಕ್ಕಿರಿದು ಅವರ ಮುಖವನ್ನು ಕೊನೆ ಬಾರಿ ನೋಡಲು ಕಾಯುತ್ತಿದ್ದರು. ಮೆರವೆಣಿಗೆಯಲ್ಲಿ ಸಂಪೂರ್ಣವಾಗಿ ಅವರ ಹಾಡುಗಳ ಸುರಿಮಳೆಯೇ ಸುರಿಯುವಂತೆ ಭಾಸವಾಗುತ್ತಿತ್ತು. ಕಿಂಗ್ ಆಫ್ ಹಮ್ಮಿಂಗ್ ಎಂದಲೇ ಹೆಸರು ಪಡೆದಿದ್ದ ಇವರ ಅಂತಿಮ ಯಾತ್ರೆ ಅಸ್ಸಾಮಿ ಸಂಗೀತ ಯುಗದ ಅಂತ್ಯವೆಂಬಂತೆ ಕಾಣುತ್ತಿತ್ತು.

1972ರಲ್ಲಿ ಜನಿಸಿದ ಗಾರ್ಗ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಸಂಗೀತದಲ್ಲಿ ತಮ್ಮ ಹೆಸರನ್ನು ಅಚ್ಚಳಿಯಂತೆ ಮಾಡಿದ್ದಾರೆ. ಅಸ್ಸಾಂ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾಗ ಜುಬೀನ್ ಗಾರ್ಗ್ ಅವರು ಸ್ಕೂಬಾ ಡೈವಿಂಗ್ ವೇಳೆ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದರು. ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !