July 11, 2026
Saturday, July 11, 2026
spot_img

‘ಮಿಲ್ಮಾ ವಾರ್ಷಿಕೋತ್ಸವ ಉಡುಗೊರೆ’ ಈ ಲಿಂಕ್ ಕ್ಲಿಕ್ ಮಾಡಿದರೆ ಬ್ಯಾಂಕ್ ಖಾತೆ ಖಾಲಿಯಾಗಬಹುದು ಎಚ್ಚರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಜನಪ್ರಿಯ ಹಾಲು ಸಹಕಾರಿ ಸಂಸ್ಥೆ ಮಿಲ್ಮಾ ಹೆಸರಿನಲ್ಲಿ ಉಡುಗೊರೆ ಯೋಜನೆ ಮೆಸೇಜ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಂಸ್ಥೆ ಇದು ನಕಲಿ ಎಂದು ಗ್ರಾಹಕರನ್ನು ಎಚ್ಚರಿಸಿದೆ.

‘ಮಿಲ್ಮಾ ವಾರ್ಷಿಕೋತ್ಸವ ಉಡುಗೊರೆ’ ಎಂಬ ಹೆಸರಿನಲ್ಲಿ ವಾಟ್ಸಾಪ್ ಮೂಲಕ ಲಿಂಕ್‌ಗಳು ಹರಿದಾಡುತ್ತಿದ್ದು, ಇದರಲ್ಲಿನ ಲಿಂಕ್‌ಗಳನ್ನು ಕ್ಲಿಕ್ ಮಾಡಿ ವೈಯಕ್ತಿಕ ಮಾಹಿತಿ ಹಂಚಿಕೊಂಡ ಕೆಲವರು ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣ ಕಳೆದುಕೊಂಡಿರುವ ಬಗ್ಗೆ ದೂರಿದ್ದಾರೆ.

ಇದನ್ನೂ ಓದಿ:

ಈ ಹಿನ್ನೆಲೆಯಲ್ಲಿ ಮಿಲ್ಮಾ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಸಂಸ್ಥೆಯ ಹೆಸರಿನಲ್ಲಿ ಹರಿದಾಡುತ್ತಿರುವ ಯಾವುದೇ ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡಬಾರದು ಹಾಗೂ ಇತರರಿಗೆ ಫಾರ್ವರ್ಡ್ ಮಾಡಬಾರದು ಎಂದು ಮನವಿ ಮಾಡಿದೆ.

ತನ್ನ 46 ವರ್ಷಗಳ ಇತಿಹಾಸ ಹಾಗೂ ವಿಶ್ವಾಸಾರ್ಹತೆಯನ್ನು ದುರುಪಯೋಗಪಡಿಸಿಕೊಂಡು ವಂಚಕರು ಈ ರೀತಿಯ ಸಂದೇಶಗಳನ್ನು ಹರಡುತ್ತಿದ್ದಾರೆ ಎಂದು ಸಂಸ್ಥೆ ಆರೋಪಿಸಿದೆ. ನಕಲಿ ಸಂದೇಶಗಳು ಮತ್ತು ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಮಿಲ್ಮಾ, ಈ ಸಂಬಂಧ ಪೊಲೀಸರಿಗೆ ಅಧಿಕೃತ ದೂರು ಕೂಡಾ ಸಲ್ಲಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !