ಹೊಸದಿಗಂತ ವರದಿ ಹುಬ್ಬಳ್ಳಿ:
ಕಳೆದ 30 ವರ್ಷದಿಂದ ಅತ್ಯಂತ ಪರಿಶುದ್ಧ ರಾಜಕಾರಣ ಮಾಡಿದ್ದೇನೆ. ಆದರೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ನನ್ನ ಬಗ್ಗೆ ಬಾಲಿಶವಾದ ಹೇಳಿಕೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿಯಲ್ಲಿರುವ ರೈಲ್ವೆ ಜಾಗವನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ರಣದೀಪ್ ಸಿಂಗ್ ಸುರ್ಜೇವಾಲ್ ಅವರ ಹೇಳಿಕೆ ಈ ರೀತಿ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಚಿಲ್ಲರೆತನದ ಬಾಲಿಶತನದ ಹೇಳಿಕೆ ಒಂದು ಮಿತಿ ಇರಬೇಕು. ಸುರ್ಜೇವಾಲ್ ಅವರು ಈ ಬಗ್ಗೆ ದಾಖಲೆ ನೀಡಬೇಕು. ಇಲ್ಲವಾದಲ್ಲಿ ಅವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈಲ್ವೆ ಜಾಗಕ್ಕೆ ಇಲ್ಲಿಯವರೆಗೂ ಐದು ಬಾರಿ ಟೆಂಡರ್ ಕರೆಯಲಾಗಿದೆ, ಯಾರು ಸಹ ಇದರಲ್ಲಿ ಭಾಗಿಯಾಗಿಲ್ಲ. ಈಗ ಮತ್ತೆ ಟೆಂಡರ್ ಕರೆಯಲಾಗಿದೆ. ನೀವು ಸಹ ಟೆಂಡರ್ನಲ್ಲಿ ಭಾಗಿಯಾಗಬಹುದು ಎಂದರು.
ಕಾಂಗ್ರೆಸ್ನವರ ಬಳಿ ಸಾಕಷ್ಟು ಭ್ರಷ್ಟಾಚಾರದ ಹಣ ಇದೆ. ಅದರ ಮುಖಾಂತರ ನೀವು ಟೆಂಡರ್ನಲ್ಲಿ ಭಾಗಿಯಾಗಬಹುದು. ನಿಮ್ಮ ಹಾಗೆ ಕಲ್ಲಿದ್ದಲಿನಲ್ಲಿ ಚೀಟಿ ಬರೆದು ಟೆಂಡರ್ ಕರೆದಿಲ್ಲ. ಆನ್ ಲೈನ್ ಮುಖಾಂತರ ಟೆಂಡರ್ ಕರೆಯಲಾಗಿದೆ ಇದರಲ್ಲಿ ನೈಯ ಪೈಸೆ ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ವಿಲ್ಲ. ಸುರ್ಜೆವಾಲ ಅವರಿಗೆ ಮೊದಲಿಗೆ ಹರಿಯಾಣವನ್ನ ಪರಿಸ್ಥಿತಿ ನಿಭಾಯಿಸಲಿ ಎಂದು ಹೇಳಿದರು.